ಹಾಸನ: ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಹಾಗೂ ಎ.ಟಿ.ರಾಮಸ್ವಾಮಿ ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನಗೊಂಡಿರುವ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ ನಿನ್ನೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಜನ ಕಳುಹಿಸಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕಾರಣದಿಂದ ಪಕ್ಷ ಬಿಡಿವುದಿಲ್ಲ ಎಂದಿದ್ದಾರೆ.
ಇನ್ನು ಶಿವಲಿಂಗೇಗೌಡರು ಒಂದು ಗಂಟೆ ನಿನ್ನೆ ಫೋನ್ನಲ್ಲಿ ಮಾತನಾಡಿದ್ದಾರೆ. ಒಂದೆರಡು ತಿಂಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಶಿವಲಿಂಗೇಗೌಡರು ನಮ್ಮ ಪಕ್ಷದಿಂದ ಮೂರು ಭಾರಿ ಶಾಸಕರಾಗಿದ್ದಾರೆ. ಅವರು ಮೂರು ಭಾರಿ ಶಾಸಕರಾಗಿದ್ದಾರೆ ಎಂದು ಕೆಲವರಿಗೆ ಅಸೂಯೆ ಇದೆ. ಅವರು ದೇವೇಗೌಡರು ಬದುಕಿರುವವರೆಗೂ ಪಕ್ಷ ಬಿಡಲ್ಲ ಎಂದಿದ್ದಾರೆ ಎಂದರು.