Sunday, October 2, 2022

‘ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ‘

Must read

ಬೆಂಗಳೂರು: ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ. ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ..? ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್​ ಅಸಮಧಾನ ಹೊರಹಾಕಿದೆ.

ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವ ಎಂಟಿಬಿ ನಾಗರಾಜ್​, ಶಾಸಕ ಎಸ್​.ಆರ್​ ವಿಶ್ವನಾಥ್​, ಸಚಿವ ಮುನಿರತ್ನ ಸಾವಿರಾರು ಕಾರ್ಯಕರ್ತರ ಮುಂದೆ ಕುಣಿದು ಕುಪ್ಪಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್​ ಕಿಡಿಕಾರಿದ್ದು, ಸಚಿವ ಮನಿರತ್ನರವರ 40% ಕಮಿಷನ್ ಲೂಟಿಗೆ ಯಾವುದೇ ಅಡೆತಡೆ ಇಲ್ಲದಾಗಿದೆ. ತೋಟಗಾರಿಕಾ ಇಲಾಖೆಯ ಹನಿ ನೀರಾವರಿ ಗುತ್ತಿಗೆದಾರರಷ್ಟೇ ಅಲ್ಲ, ಇತರ ಕಾಮಗಾರಿಗಳಲ್ಲೂ ಅಧಿಕಾರಿಗಳಿಗೆ ಕಮಿಷನ್ ಪಡೆಯುವ ಟಾಸ್ಕ್ ನೀಡಿದ್ದು ಸಚಿವ ಮುನಿರತ್ನರ ಸಾಧನೆ.ಈ ಸಾಧನೆಗಾಗಿಯೇ ನೃತ್ಯ ನಡೆಸುತ್ತಿದ್ದೀರಾ..? ಎಂದು ಪ್ರಶ್ನಿಸಿದೆ.

ಇನ್ನು 40% ಕಮಿಷನ್ ಹಣದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಸಮಾವೇಶಕ್ಕೆ ಕೋಟಿ ಕೋಟಿ ಹಣ ಸುರಿಯಲಾಗುತ್ತಿದೆ. ಸಮಾವೇಶದ ವೇದಿಕೆ ಅಲಂಕಾರದ ಖರ್ಚಿನಲ್ಲಿ ಮೃತ ಅಂಕಿತಾಳಿಗೆ ಪರಿಹಾರ ನೀಡಬಹುದಿತ್ತು. ಹಾಡು, ನೃತ್ಯಗಳ ಖರ್ಚಿನಲ್ಲಿ ಬೆಂಗಳೂರಿನ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು. ರಸ್ತೆ ಗುಂಡಿಗೆ ಬಲಿಯದವರಿಗೆ ಪರಿಹಾರ ನೀಡಬಹುದಿತ್ತು ಎಂದು ಕಾಂಗ್ರೆಸ್​ ಆಕ್ರೋಶ ಹೊರಹಾಕಿದೆ.

Latest article