Sunday, October 2, 2022

ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಸಚಿವ ಮುನಿರತ್ನ

Must read

ಕೋಲಾರ: ಸರ್ಕಾರ ನಡೆಯುತ್ತಿಲ್ಲ ಮ್ಯಾನೇಜ್ ಮಾಡುತ್ತಿದ್ದೇವೆ ಎನ್ನುವ ಸಚಿವ ಮಾಧುಸ್ವಾಮಿ ಆಡಿಯೋ ಹೇಳಿಕೆಗೆ ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ತಿರುಗೇಟು ನೀಡಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅವರ ಹಿರಿತನಕ್ಕೆ ಈ ರೀತಿ ಹೇಳಿಕೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಸರ್ಕಾರದಲ್ಲಿ ಮಾಧುಸ್ವಾಮಿ ಸಹ ಒಂದು ಭಾಗ. ಕ್ಯಾಬಿನೆಟ್​ನ ಪ್ರತಿಯೊಂದು ಅಂಶದಲ್ಲೂ ಅವರು ಭಾಗವಹಿಸುತ್ತಿದ್ದಾರೆ. ಅಂತಹ ಹೇಳಿಕೆ ನೀಡಿದರೆ ಅವರು ಸಹ ಪಾಲುದಾರರಾಗಿರುತ್ತಾರೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡಬಾರದು ಎಂದು ಕಿಡಿಕಾರಿದರು.

Latest article