Tuesday, August 16, 2022

ಕರ್ನಾಟಕವನ್ನು ಪ್ರಪಂಚದ ಭೂಪಟದಲ್ಲಿ ಕಾಣುವಂತೆ ಮಾಡಿದ್ದು ಕಾಂಗ್ರೆಸ್​ ಸರ್ಕಾರ- ರಾಹುಲ್​ ಗಾಂಧಿ

Must read

ದಾವಣಗೆರೆ: ನಾನಿಂದು ಸಂಭ್ರಮದ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನನ್ನ ಹಾಗೂ ಸಿದ್ದರಾಮಯ್ಯನವರ ನಡುವೆ ವಿಶೇಷವಾದ ಬಾಂಧವ್ಯವಿದೆ. ಆ ಕಾರಣಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಒಬ್ಬ ವ್ಯಕ್ತಿಯಾಗಿ ನಾನು ಸಿದ್ದರಾಮಯ್ಯ ಅವರನ್ನು ಇಷ್ಟ ಪಡುತ್ತೇನೆ ಎಂದು ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಹೇಳಿದ್ದಾರೆ.

ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಅವರ ವಿಚಾರಗಳಿಗೂ ನನ್ನ ಸಹ ಮತವಿದೆ. ಐದು ವರ್ಷ ಅವರು ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ನಡೆಸಿರುವ ರೀತಿಯ ಬಗ್ಗೆ ನನಗೆ ಹಮ್ಮೆ ಇದೆ. ಕರ್ನಾಟಕದ ಎಲ್ಲಾ ಸಮಸ್ಯೆಯ ಬಗ್ಗೆ ಅವರಿಗೆ ಒಂದು ದೂರದೃಷ್ಟಿ ಇತ್ತು. ಜೊತೆಗೆ ಕರ್ನಾಟಕದ ಎಲ್ಲಾ ಬಡವರ ಬಗ್ಗೆ ಕಾಳಜಿ ಇತ್ತು ಎಂದು ಸಿದ್ದರಾಮಯ್ಯ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಇನ್ನು  ಕರ್ನಾಟಕದಲ್ಲಿ ಈಗಿರುವ ಬಿಜೆಪಿ ಸರ್ಕಾರದಲ್ಲಿ ಈ ರೀತಿಯ ಪರಿಸ್ಥಿತಿ ಇಲ್ಲ. ಕಾಂಗ್ರೆಸ್​ ಜನರನ್ನು ಒಗ್ಗೂಡಿಸುವ ಕೆಲಸ ಮಾಡಿದರೆ ಬಿಜೆಪಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರ ನಡೆಯುತ್ತಿರುವ ಭ್ರಷ್ಟಚಾರವನ್ನು ಸಂಪೂರ್ಣ ಕರ್ನಾಟಕ ನೋಡುತ್ತಿದೆ. ಕರ್ನಾಟಕದಲ್ಲಿ ಇಂದಿಗೂ ಜನ ಸಿದ್ದರಾಮಯ್ಯ ಸರ್ಕಾರ ನೀಡಿರುವ ಯೋಜನೆಗಳನ್ನು ನೆನಪಿಸಿಕೊಳ್ಳುತ್ತಾರೆ. ಮತ್ತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ನೇತೃತ್ವದಲ್ಲಿ ಇಂತಹ ಯೋಜನೆಗಳನ್ನು ಕಾಂಗ್ರೆಸ್​ ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ. ಕರ್ನಾಟಕವನ್ನು ಪ್ರಪಂಚದ ಭೂಪಟದಲ್ಲಿ ಕಾಣುವಂತೆ ಮಾಡಿದ್ದು ಕಾಂಗ್ರೆಸ್​ ಸರ್ಕಾರ ಎಂದರು.

Latest article