ಬೆಂಗಳೂರು: ಕೆಲ ಸಮಯದಿಂದ ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇಂದು ಮತ್ತೆ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ, ರಾಜಕೀಯದಲ್ಲಿ ಪಕ್ಷಾತೀತವಾಗಿ ಒಬ್ಬರನ್ನೊಬ್ಬರು ಭೇಟಿಯಾಗುತ್ತಾರೆ. ಇನ್ನೂ ಕೆಲವರು ಬೇರೆ ಪಕ್ಷದವರೊಂದಿಗೆ ಸಂಬಂಧ ಬೆಳೆಸುತ್ತಾರೆ. ಆದರೆ ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ ಪಾಟೀಲ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿರುವುದು ಆಶ್ಚರ್ಯವಾಗಿದೆ. ಪಕ್ಷ ಒಗ್ಗಟ್ಟಾಗಿ ಮುಂದಿನ ಚುನಾವಣೆ ಎದುರಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
People across parties meet each other, go to functions, some even get married into families- I’m surprised @DKShivakumar would say this about @MBPatil who’s a staunch congressman. Shouldn’t the party be fighting elections as one unit? @INCIndia https://t.co/YOT11h35Cq
— Divya Spandana/Ramya (@divyaspandana) May 11, 2022