Wednesday, June 29, 2022

ಮಕ್ಕಳಿಗೆ ರೈಫಲ್ ಟ್ರೈನಿಂಗ್ ಮಾಡಿರುವುದು ಸರ್ಕಾರದ ತಾಲಿಬಾನ್ ಸಂಸ್ಕೃತಿ ತೋರಿಸುತ್ತಿದೆ-ಯು.ಟಿ. ಖಾದರ್

Must read

ದಕ್ಷಿಣ ಕನ್ನಡ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಈ ರೀತಿ ಮಾಡಿರುವುದು ಸರ್ಕಾರದ ತಾಲಿಬಾನ್ ಸಂಸ್ಕೃತಿ ತೋರಿಸುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಗೂಂಡಾಗಿರಿ ಮಾಡಲು ಹೊರಗುತ್ತಿಗೆ ಕೊಟ್ಟಂತಿದೆ. ಎನ್​​ಸಿಸಿಯಂಥ ಸಂಸ್ಥೆಗಳು ಅಧಿಕೃತ, ಅವರು ದೇಶ ಸೇವೆಗಾಗಿ ತರಬೇತಿ ಕೊಡುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಹೈಸ್ಕೂಲ್ ಪ್ರಾರಂಭಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆ, ಬಿಡಿ ಅಂಗನವಾಡಿ ಕೂಡ ಹೊಸತಾಗಿ ಆರಂಭಿಸಿಲ್ಲ ಎಂದಿದ್ದಾರೆ.

ಇನ್ನು ವಿದ್ಯಾಸಂಸ್ಥೆಗಳಲ್ಲಿ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ಕೊಟ್ಟಿರೋದು ಸರ್ಕಾರದ ನಿರ್ಲಕ್ಷ್ಯ. ಗೃಹ ಸಚಿವರು ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಜನರಿಗೆ ಉತ್ತರಿಸಲಿ. ಈ ವಿಚಾರದಲ್ಲಿ ಮುಖ್ಯಮಂತ್ರಿ ಕೂಡ ಮೌನವಾಗಿರುವುದು ಸರಿಯಲ್ಲ. ಮಕ್ಕಳ ಕೈಗೆ ಪುಸ್ತಕ, ಪೆನ್ ಕೊಡುವ ಬದಲು ಆಯುಧ ಕೊಡ್ತಾರಾ..? ಗನ್ ಹಿಡಿದುಕೊಂಡು ಸುತ್ತಾಡಲಿಕ್ಕೆ ಇದೇನು ಉತ್ತರ ಪ್ರದೇಶವಾ..? ದೇಶದ ಭವಿಷ್ಯ ಮಕ್ಕಳು, ಮಕ್ಕಳಲ್ಲಿ ದ್ವೇಷದ ವಾತಾವರಣ ಬೇಡ. ಹೀಗಾಗಿ ದ್ವೇಷ ಹುಟ್ಟುವ ವಿಚಾರಗಳು ಮಕ್ಕಳಲ್ಲಿ ಬೇಡ ಎಂದು ಹೇಳಿದ್ದಾರೆ.

Latest article