ಬೆಂಗಳೂರು: ಇಂದ್ರಜಿತ್ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಮನವಿ ಪತ್ರದ ಮೇಲೆ ತನಿಖೆ ನಡೆಸಲು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅವರು ಯಾವುದೇ ಸಾಕ್ಷಿಗಳನ್ನು ನಮಗೆ ನೀಡಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ನಟ ದರ್ಶನ್ ವಿರುದ್ಧ ನೇರವಾಗಿ ಹಲ್ಲೆ ಆರೋಪ ಮಾಡಿದ್ದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತಾಡಿದ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದಲ್ಲಿ ಸ್ಪಷ್ಟವಾಗಿ ಏನು ಹೇಳಿಲ್ಲ. ನನಗೆ ಕೊಟ್ಟ ಮನವಿ ಮೇಲೆ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.