Sunday, October 2, 2022

ಮಾಣಿಕ್​ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

Must read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಬೆಂಗಳೂರಿನ ಮಾಣಿಕ್​ ಷಾ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.

ಮಾಣಿಕ್​ ಷಾ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಎರಡು ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ.

ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ್ದಾರೆ. ಇನ್ನು ರಾಜ್ಯಾದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ.

Latest article