ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಗಳ ಬಂಧನ


ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು: ಜಾಮೀನಿನ ಮೇಲೆ ಹೊರಬಂದು ಮತ್ತೆ ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕಾಂಗೊ‌ ದೇಶದ ಇಬ್ಬರು ವಿದೇಶಿ ಪ್ರಜೆಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಎಂಡಸಿ ಡೈಡಿಯರ್ ಮತ್ತು ಬುಹೇಶ್ ಬಹುಗ್ವೆ ಬಂಧಿತ ವಿದೇಶಿ ಪ್ರಜೆಗಳು.

ಆರೋಪಿಗಳನ್ನು ಈ ಹಿಂದೆ ಫಾರಿನರ್ಸ್ ಆಕ್ಟ್ ಮತ್ತು ಎನ್​ಡಿಪಿಎಸ್ ಕಾಯ್ದೆಯಡಿ ಜೈಲಿಗೆ ಹಾಕಲಾಗಿತ್ತು. ಇದೀಗ ಜಾಮೀನಿನ ಮೇಲೆ ಹೊರಬಂದು ಮತ್ತೆ ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.

ಬಂಧನದ ಬಳಿಕ ವಿದೇಶಿ ಪ್ರಜೆಗಳನ್ನು ಎಫ್​ಆರ್​ಆರ್​ಒ ಮುಂದೆ ಹಾಜರುಪಡಿಸಲಾಗಿದ್ದು, ಇಬ್ಬರನ್ನು ವಿದೇಶಿಗರ ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲು ಆದೇಶ ನೀಡಿದ್ದಾರೆ.

Related Stories

No stories found.
TV 5 Kannada
tv5kannada.com