Monday, November 29, 2021

ಟೆಸ್ಟ್ ಡ್ರೈವ್ ನೆಪದಲ್ಲಿ ಕಾರುಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್

Must read

ಬೆಂಗಳೂರು: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರುಗಳನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಾರನ್ನು ಕೊಂಡುಕೊಳ್ಳುವ ನೆಪದಲ್ಲಿ ಶೋ ರೂಮ್​ಗಳಿಗೆ ತೆರಳುತ್ತಿದ್ದ ಆರೋಪಿ, ಟೆಸ್ಟ್ ಡ್ರೈವ್​ಗೆ ತೆಗೆದುಕೊಂಡು ಹೋಗುತ್ತಿದ್ದ. ಬಳಿಕ ತನ್ನ ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡು ವಂಚನೆ ಮಾಡುತ್ತಿದ್ದ. ಅದರಂತೆ ಮಹಾಲಕ್ಷ್ಮೀ ಲೇಔಟ್​ನಲ್ಲಿ ಇಟಿಯೋಸ್​ ಕಾರೊಂದನ್ನು ಟೆಸ್ಟ್ ಡ್ರೈವ್​ಗೆಂದು ತೆಗೆದುಕೊಂಡು ಹೋಗಿದ್ದ ಅಸಾಮಿ, ಬಳಿಕ ನಾಪತ್ತೆಯಾಗಿದ್ದ. ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನ ವಿಚಾರಣೆ ವೇಳೆ ವಿವಿಧ ಠಾಣೆಗಳಲ್ಲಿ 35 ಲಕ್ಷಕ್ಕೂ ಅಧಿಕ ಮೌಲ್ಯದ 7 ಕಾರುಗಳನ್ನು ಟೆಸ್ಟ್ ಡ್ರೈವ್ ನೆಪದಲ್ಲಿ ಕೊಂಡೊಯ್ದಿರುವ ಮಾಹಿತಿ ಲಭ್ಯವಾಗಿದೆ.

Latest article