Wednesday, June 29, 2022

ದೆಹಲಿ‌ ಪ್ರವಾಸ ಹಿನ್ನೆಲೆ: ಸಿಎಂ ಬೊಮ್ಮಾಯಿ ನಿವಾಸಕ್ಕೆ ಶಾಸಕರು, ಮಂತ್ರಿಗಳ ಆಗಮನ

Must read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದ ಹಿನ್ನೆಲೆಯಲ್ಲಿ ಆರ್.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಶಾಸಕರು, ಮಂತ್ರಿಗಳು ಆಗಮಿಸಿದ್ದಾರೆ.

ಶಾಸಕರಾದ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಮಾಡಾಳ್ ವಿರೂಪಾಕ್ಷಪ್ಪ, ಎಂ ಕೃಷ್ಣಪ್ಪ, ವೀರಣ್ಣ ಚರಂತಿಮಠ್, ಸಚಿವ ಗೋವಿಂದ್ ಕಾರಜೋಳ, ಶಾಸಕ ತಿಪ್ಪಾರೆಡ್ಡಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸ್ವಕ್ಷೇತ್ರದಲ್ಲೇ ಹೆಚ್ಚಾಗಿರುತ್ತಿದ್ದ ಕೆ.ಎಸ್.ಈಶ್ವರಪ್ಪ ಸಿಎಂ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 11ನೇ ಬಾರಿಗೆ ದೆಹಲಿಗೆ ತೆರಳುತ್ತಿದ್ದಾರೆ. ಇಂದು ಮಧ್ಯಾಹ್ನ 1.20ಕ್ಕೆ ದೆಹಲಿಗೆ ಪಯಣ ಬೆಳಸಲಿದ್ದು, ಶುಕ್ರವಾರ ಸಂಜೆ 4.15 ಕ್ಕೆ ದೆಹಲಿಯಿಂದ ವಾಪಸ್ ಬರಲಿದ್ದಾರೆ. ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೆ ಸಿಎಂ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

Latest article