ಬ್ಯೂಟಿಶಿಯನ್ ಕೆಲಸಕ್ಕೆಂದು ಬಂದು ಡ್ರಗ್ಸ್​ ಮಾರುತ್ತಿದ್ದ ಮಹಿಳೆ ಸೇರಿ ಇಬ್ಬರ ಬಂಧನ

ಬ್ಯೂಟಿಶಿಯನ್ ಕೆಲಸಕ್ಕೆಂದು ಬಂದು ಡ್ರಗ್ಸ್​ ಮಾರುತ್ತಿದ್ದ ಮಹಿಳೆ ಸೇರಿ ಇಬ್ಬರ ಬಂಧನ

ಬೆಂಗಳೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಇಬ್ಬರು ಅಂತರಾಜ್ಯ ಪೆಡ್ಲರ್​ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಮಣಿಪುರ ಮೂಲದ ಮಹಿಳೆ, ಹೆರಾಯಿನ್ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದಳು. ಈಕೆ ಬ್ಯೂಟಿಶಿಯನ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದಳು. ಕಮ್ಮನ್ನಹಳ್ಳಿಯ ಬ್ಯೂಟಿ ಎಂಡ್ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಸ್ನೇಹಿತನ ಜೊತೆ ಸೇರಿ ಹೆರಾಯಿನ್ ಮಾರಾಟ ಮಾಡುತ್ತಿದ್ದಳು.

ಸದ್ಯ ಆರೋಪಿಗಳನ್ನ ಬಂಧಿಸಿರುವ ಬಾಣಸವಾಡಿ ಪೊಲೀಸರು, 1.5 ಲಕ್ಷ ಮೌಲ್ಯದ 10 ಗ್ರಾಂ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.

Related Stories

No stories found.
TV 5 Kannada
tv5kannada.com