Tuesday, October 26, 2021

ಬೆಂಗಳೂರು ಜನರೇ ಎಚ್ಚರ: ಇಂದು ಕೂಡ ಗುಡುಗು ಸಹಿತ ಮಳೆಯ ಮುನ್ಸೂಚನೆ..!

Must read

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಸಿಲಿಕಾನ್​ ಸಿಟಿ ಜನರ ತತ್ತರಿಸಿದ್ದಾರೆ. ಇಂದು ಕೂಡ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದ್ದು,  ವೀಕೆಂಡ್​ ಸುತ್ತಾಟಕ್ಕೆ ತೆರಳುವವರು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ನಿನ್ನೆ ರಾತ್ರಿ ಬೆಂಗಳೂರಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಏಕಾಏಕಿ ನಿರಂತರ ಸುರಿದ ಮಳೆಯಿಂದ ರಸ್ತೆಗಳು ಅಂಡರ್​ ಪಾಸ್​ಗಳು ಜಲಾವೃತವಾಗಿದ್ದು, ತಡರಾತ್ರಿಯವರೆಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು.

ಅಕ್ಟೋಬರ್​ 26ರಂದು ಮುಂಗಾರು ಮುಗಿದು ಹಿಂಗಾರು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

More articles

Latest article