ಬೆಂಗಳೂರು: ನಗರದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಭಾರೀ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.
ಚಿಕ್ಕಪೇಟೆಯಲ್ಲಿನ 100 ವರ್ಷ ಹಿಂದಿನ ಕಟ್ಟಡ ಭಾರೀ ಮಳೆಗೆ ಕುಸಿದಿದ್ದು, ಗ್ರೌಂಡ್ ಫ್ಲೋರ್ನಲ್ಲಿದ್ದ ಮೂರು ಬಟ್ಟೆ ಅಂಗಡಿಗಳು ನೆಲಸಮವಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಕುಸಿದ ಮನೆ ತೆರವು ಕಾರ್ಯಾಚರಣೆ ನಡೆಸಲಾಗಿದೆ.