Tuesday, August 16, 2022

ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಚಕ್ರವರ್ತಿ ಸೂಲಿಬೆಲೆ

Must read

ಬೆಂಗಳೂರು: ಕರ್ನಾಟಕ ರತ್ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ ಬಳಿ ಚಕ್ರವರ್ತಿ ಸೂಲಿಬೆಲೆ ಕ್ಷಮೆಯಾಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿಗಳಿಗೆ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು, ನಟನ ಮರಣದ ಸಂದರ್ಭದಲ್ಲಿ ಮೂರು ದಿನ ಕಳೆಯಲು ಸಮಯವಿದೆ ಎಂದು ಹೇಳಿ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಕ್ಷಮೆಯಾಚಿಸಿದ್ದು, ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು ಎಂದು ಕ್ಷಮೆಯಾಚಿಸಿದ್ದಾರೆ.

Latest article