Monday, January 24, 2022

ಮಾರ್ಚ್ ಒಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

Must read

ಬೆಂಗಳೂರು: ಮಾರ್ಚ್ ಒಳಗೆ ನಗರದ ರಸ್ತೆಗುಂಡಿಗಳ ಮುಚ್ಚುವ ಕಾರ್ಯ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಬೊಮ್ಮಾಯಿ, ಮಾರ್ಚ್ ಒಳಗೆ ರಸ್ತೆಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು. ರಸ್ತೆ ದುರಸ್ತಿ ಕಾಮಗಾರಿ ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಳೆಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪವಾಯಿತು. ರಾಜಕಾಲುವೆ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಬೆಂಗಳೂರು ನಗರದಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ. ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಮಳೆ ಬಂದರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಬೇಕು. ರಾಜಕಾಲುವೆ ಒತ್ತುವರಿ ತೆರವು ಬಗ್ಗೆ ಗಮನ ಹರಿಸಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು. ರಸ್ತೆಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಎಂದರು.

Latest article