Monday, November 29, 2021

ನಟ ಸ್ನೇಹಿತ್​ ವಿರುದ್ಧ ಹಲ್ಲೆ ಆರೋಪ: ಮುಲಾಜಿಲ್ಲದೆ ಆರೋಪಿಗಳನ್ನು ಬಂಧಿಸುವಂತೆ ​ಕಮಿಷನರ್​ ಸೂಚನೆ

Must read

ಬೆಂಗಳೂರು: ಸ್ಯಾಂಡಲ್​ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ, ನಟ ಸ್ನೇಹಿತ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳು ಮೊಬೈಲ್ ಸ್ವಿಚ್​ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕಾಗಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪ್ರಕರಣದ ಹಿಂದೆ ಯಾವುದೇ ರಾಜಕೀಯ ಒತ್ತಡವಿಲ್ಲ. ಮುಲಾಜಿಲ್ಲದೆ ಆರೋಪಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಇನ್ನು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ಅವರ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ. ಸದ್ಯದಲ್ಲಿಯೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಒಂದು ವೇಳೆ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

Latest article