ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನನಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಆದರೆ, ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳ ಬೇಕಾಗಿ ವಿನಂತಿ.
— S T Somashekar Gowda (@STSomashekarMLA) January 11, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಕಂದಾಯ ಸಚಿವ ಆರ್.ಅಶೋಕ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಲವು ನಾಯಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.