Thursday, January 27, 2022

ರೀ ಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ..!

Must read

ಬೆಂಗಳೂರು: ಸಿಲಿಂಡರ್​ ದುರಂತದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಗರದ ಮೂಡಲ ಪಾಳ್ಯದಲ್ಲಿ ನಡೆದಿದೆ.

ಮೂಡಲಪಾಳ್ಯ ಸರ್ಕಲ್​​ನ‌ ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಗ್ಯಾಸ್​​ ಲೀಕ್​ ಆಗಿದ್ದು, ನೋಡನೋಡುತ್ತಿದಂತೆ ಬೆಂಕಿ ಹೊತ್ತಿಕೊಂಡಿದೆ. ವಿಚಾರ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

ಸ್ಥಳದಲ್ಲಿ ಹತ್ತಾರು ಸಿಲಿಂಡರ್​ಗಳಿದ್ದು, ಕೂದಲೆಳೆ ಅಂತರದಲ್ಲಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ. ಇನ್ನು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article