Thursday, January 20, 2022

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಘೋಷಣೆ

Must read

ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆದರೆ, ಡಿ. 30ರಂದು ಫಲಿತಾಂಶ ಹೊರಬೀಳಲಿದೆ.

5 ನಗರಸಭೆ, 19 ಪುರಸಭೆ, 34 ಪಂಚಾಯಿತಿಗಳ 1,185 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ವಾಪಸ್ ಪಡೆಯಲು ಡಿಸೆಂಬರ್ 18 ಕೊನೆಯ ದಿನವಾಗಿದೆ.

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಸೂಚಿಸಿದೆ.

Latest article