Wednesday, June 29, 2022

ಬೆಂಗಳೂರಿನಲ್ಲಿ ಗಾಂಜಾ ಮಾರಾಟ: ಇಬ್ಬರು ಡ್ರಗ್​ ಪೆಡ್ಲರ್​​ಗಳ ಬಂಧನ

Must read

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ಅಭಿ ಮತ್ತು ಅಭಿಷೇಕ ಬಂಧಿತ ಆರೋಪಿಗಳು.

ಆರೋಪಿಗಳು ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೆಜಿ 550 ಗ್ರಾಂ ಮಾದಕ ವಸ್ತು ಹಾಗೂ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿರುದ್ಧ ಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article