Tuesday, August 16, 2022

ಅಗ್ನಿ ಅವಘಡ: ಸುಟ್ಟು ಕರಕಲಾದ ಕಾಟನ್ ಬೆಡ್ ತಯಾರಿ ಅಂಗಡಿ

Must read

ಬೆಂಗಳೂರು: ಶಾರ್ಟ್ ಸರ್ಕ್ಯೂಟ್​ನಿಂದ ಕಾಟನ್ ಬೆಡ್ ತಯಾರಿಸುವ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ಮೂಡಲಪಾಳ್ಯ ಬಳಿ‌ ನಡೆದಿದೆ.

ಮೂಡಲಪಾಳ್ಯ ಬಳಿ‌ಯ  ಕಾಟನ್ ಬೆಡ್ ತಯಾರಿಸುವ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಅಂಗಡಿ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Latest article