Tuesday, August 16, 2022

ಡಿಜೆ ಹಳ್ಳಿ ದರ್ಗಾದಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

Must read

ಬೆಂಗಳೂರು: ನಗರದ ಡಿಜೆ ಹಳ್ಳಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಂಪೂರ್ಣ ದರ್ಗಾ ಹೊತ್ತಿ ಉರಿದಿದೆ.

ಫ್ರೇಜರ್​ ಟೌನ್ ಬಳಿಯ ಟ್ಯಾನಿ ರಸ್ತೆಯಲ್ಲಿರುವ ಮಸ್ತಾನಿ ದರ್ಗಾದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ದರ್ಗಾ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Latest article