Friday, January 21, 2022

ಗವಿ ಗಂಗಾಧರೇಶ್ವರ ದೇಗುಲದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

Must read

ಬೆಂಗಳೂರು: ಬಸವನಗುಡಿಯ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸೂರ್ಯ ರಶ್ಮಿ ಶಿವ ಲಿಂಗವನ್ನು ಸ್ಪರ್ಶಿಸಿದೆ.

ಐತಿಹಾಸಿಕ ದೇವಾಲಯವಾದ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿನ ಶಿವಲಿಂಗದ ಮೇಲೆ ಸೂರ್ಯ ರಶ್ಮಿಯ ದರ್ಶನವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಸೂರ್ಯ ಗವಿಗಂಗಾಧರೇಶ್ವರನಿಗೆ ನಮಿಸಿದ್ದಾನೆ. ಲಿಂಗದ ಮುಂದಿರುವ ನಂದಿಕೊಂಬಿನಿಂದ ಹಾದು ಶಿವನ ಸ್ಪರ್ಶ ಮಾಡಿದೆ. ಸೂರ್ಯರಶ್ಮಿ ಸ್ಪರ್ಶದ ಹಿನ್ನೆಲೆ ಶಿವನಿಗೆ ವಿಶೇಷ ಅಭಿಷೇಕ ಮಾಡಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಗವಿ ಗಂಗಾಧರೇಶ್ವರ ದೇವರ ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಭಕ್ತರು ಮನೆಯಲ್ಲೇ ಕುಳಿತು ವಿಸ್ಮಯವನ್ನು ಕಣ್ತುಂಬಿಕೊಂಡರು.

Latest article