ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಜನರು ನಲುಗಿಹೋಗಿದ್ದಾರೆ. ರಸ್ತೆಗಳ್ಲಿ ಮಂಡಿಯುದ್ದ ನೀರು ನಿಂತಿದ್ದು, ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ.
ಇಷ್ಟು ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು, ಇದೀಗ ಮಳೆಯ ಅಬ್ಬರ ಜೋರಾಗಿದೆ. ನಿನ್ನೆ ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿತ್ತು. ಆದರೆ, ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿದೆ. ಮೆಜೆಸ್ಟಿಕ್, ಮಾರ್ಕೆಟ್, ಮಲ್ಲೇಶ್ವರಂ, ಚಾಮರಾಜಪೇಟೆ, ಶೇಷಾದ್ರಿಪುರಂ, ಸದಾಶಿವನಗರ, ಕೆಜಿ ರೋಡ್, ಶಾಂತಿನಗರ, ಡಬಲ್ ರೋಡ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ. ಇನ್ನೂ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ರಸ್ತೆಗಳೆಲ್ಲವೂ ಹೊಳೆಯ ರೂಪ ತಾಳಿದ್ದರಿಂದ ನೀರಿನ ರಭಸಕ್ಕೆ ಕಾರು, ಬೈಕ್ಗಳು ಕೊಚ್ಚಿ ಹೋಗಿವೆ. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶಗಳು, ಅಂಡರ್ ಪಾಸ್ಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಯಂತಾಗಿರುವ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳು ಹಾಗೂ ಆಟೋ ರಿಕ್ಷಾಗಳು ಕೆಟ್ಟು ನಿಂತಿದ್ದು, ಸವಾರರು ಪರದಾಡುವಂತಾಗಿದೆ.