Thursday, May 19, 2022

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಯುವಕ ಬಲಿ..!

Must read

ಬೆಂಗಳೂರು: ಹಿಟ್​ ಆ್ಯಂಡ್​ ರನ್​ಗೆ ಯುವಕ ಸಾವನ್ನಪ್ಪಿರುವ ಘಟನೆ ಬಾಗಲೂರು ಸಮೀಪದ ಕಟ್ಟಿಗೇನಹಳ್ಳಿ ಬಸ್​​ ನಿಲ್ದಾಣದ ಬಳಿ ನಡೆದಿದೆ.

ನಿನ್ನೆ ತಡರಾತ್ರಿ 1ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನ ಗುರುತು ಈವೆರೆಗೂ ಪತ್ತೆಯಾಗದ ಕಾರಣ ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತನ ಹಾಗೂ ಅಪಘಾತವೆಸಗಿ ಪರಾರಿಯಾಗಿರುವ ವಾಹನದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article