ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಗಲೂರಿನಲ್ಲಿರುವ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್, ಕೃಷ್ಣದೇವರಾಯ ಇನ್ಸ್ಟಿಟ್ಯೂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಪಾವತಿಸದೇ ವಂಚನೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕಾಲೇಜು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಮನೆ ಮೇಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿರುವ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು ಎಪ್ಪತ್ತು ವಾಹನಗಳಲ್ಲಿ ಕರ್ನಾಟಕ ಗೋವಾ ವಲಯದ ಐಟಿ ಅಧಿಕಾರಿಗಳು ತೆರಳಿದ್ದಾರೆ.