Tuesday, August 16, 2022

ರಾಜ್ಯದಲ್ಲಿ ಮತ್ತೆ 10 ಓಮೈಕ್ರಾನ್‌ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 76ಕ್ಕೆ

Must read

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 10 ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಜನವರಿ 2 ರಂದು ಕರ್ನಾಟಕದಲ್ಲಿ ಹತ್ತು ಹೊಸ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.

10 ಪ್ರಕರಣಗಳ ಪೈಕಿ 8 ಕೇಸ್​ಗಳು ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ರೆ, ಧಾರವಾಡದಲ್ಲಿ ಎರಡು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಂಟು ಪ್ರಕರಣಗಳಲ್ಲಿ ಐದು ಜನರು ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.

ಸದ್ಯ ಓಮೈಕ್ರಾನ್ ಸೋಂಕು ಕಾಣಿಸಿಕೊಂಡಿರುವ 10ಜನ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.

Latest article