Wednesday, May 18, 2022

LKG, UKG ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

Must read

ಬೆಂಗಳೂರು: ರಾಜ್ಯದಲ್ಲಿ ಎಲ್​ಕೆಜಿ ಹಾಗೂ ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್​ ಸಿಗ್ನಲ್​ ನೀಡಿದ್ದು, ನವೆಂಬರ್​ 8ರಿಂದ ತರಗತಿ ಆರಂಭವಾಗಲಿದೆ.

ಕೊರೊನಾ ನಿಯಮ ಪಾಲಿಸಿ ಎಲ್​ಕೆಜಿ ಹಾಗೂ ಯುಕೆಜಿ ಭೌತಿಕ ತರಗತಿ ತರಗತಿ ಆರಂಭಕ್ಕೆ ಸರ್ಕಾರ ಒಪ್ಪಿಗೆ  ಕೊಟ್ಟಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿಗಳ ವಿವರ

-ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.

-ಕೊರೊನಾ ಪ್ರಕರಣ 2% ಇರುವ ತಾಲೂಕುಗಳಲ್ಲಿ ಮಾತ್ರ ಎಲ್​ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡಬೇಕು.

-ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.

-ನಿತ್ಯ ಶಾಲಾ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು.

-ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

-50 ವರ್ಷ ಮೇಲ್ಪಟ್ಟ ಶಿಕ್ಷಕರು ಹಾಗೂ ಸಿಬ್ಬಂದಿ ಫೇಸ್ ಶೀಲ್ಡ್ ಧರಿಸಬೇಕು.

-ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.

-ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ನೀಡಬೇಕು.

-ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

Latest article