Sunday, October 2, 2022

‘ಪೇ ಸಿಎಂ’ ಪೋಸ್ಟರ್​ ಅಳವಡಿಕೆ ವಿವಾದದ ಬಗ್ಗೆ ಸ್ಫೋಟಕ ಮಾಹಿತಿ

Must read

ಬೆಂಗಳೂರಿನಲ್ಲಿ ‘ಪೇ ಸಿಎಂ’ ಪೋಸ್ಟರ್​ ಅಳವಡಿಕೆ ವಿವಾದದ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ. ಆಟೋದಲ್ಲಿ ಬಂದ ಮೂವರಿಂದ ಈ ಕೃತ್ಯ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಬೆಳಗ್ಗೆ 4:30 ರಿಂದ 5:30ರ ಸಮಯದಲ್ಲಿ ಪೋಸ್ಟರ್​ ಅಂಟಿಸಿದ್ದಾರೆ. ಮುಂಜಾನೆ 5 ಗಂಟೆಗೆ ನೈಟ್ ಬೀಟ್ ಪೊಲೀಸರ ಡ್ಯೂಟಿ ಮುಗಿಯುತ್ತದೆ. ಇದನ್ನೇ ತಮ್ಮ ಉಪಯೋಗಕ್ಕೆ ಬಳಸಿಕೊಂಡ ಕಿಡಿಗೇಡಿಗಳು, ಈ ವೇಳೆ ಪೋಸ್ಟರ್ ಅಂಟಿಸಿದ್ದಾರೆ. ಕಿಡಿಗೇಡಿಗಳು ಪೋಸ್ಟರ್​ಗಳನ್ನ ಅಂಟಿಸಿ ಆಟೋದಲ್ಲಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ನಗರದಲ್ಲಿ ಸುಮಾರು 10ಕ್ಕೂ ಹೆಚ್ಚು ಕಡೆ ಪೋಸ್ಟರ್ ಅಂಟಿಸಿರುವುದು ಪತ್ತೆಯಾಗಿದೆ. ಇದಕ್ಕಾಗಿ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನ ರಚನೆ ಮಾಡಲಾಗಿದೆ. ತನಿಖೆಯಿಂದ ಇನ್ನಷ್ಟು ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.

Latest article