Tuesday, November 29, 2022

ನವೆಂಬರ್ 1ಕ್ಕೆ ಪುನೀತ್ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

Must read

ಬೆಂಗಳೂರು: ಆಗಸ್ಟ್ 5ರಿಂದ 15ರವರೆಗೆ ನಗರದ ಪ್ರತಿಷ್ಠಿತ ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಡಾ.ರಾಜ್​ಕುಮಾರ್​ ಹಾಗೂ ಪುನೀತ್​ ರಾಜ್​ಕುಮಾರ್​ ಸ್ಮರಣಾರ್ಥವಾಗಿ ಮಾಡುತ್ತಿದ್ದಾರೆ. ಈ ಬಾರಿಯ ಪ್ಲವರ್ ಶೋ ಉತ್ತಮವಾಗಿದೆ. ಜನ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಬರಬೇಕು. ಈ ಬಾರಿ ನವೆಂಬರ್ 1ರಂದು ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನವನ್ನು ಕೊಡಲಿದ್ದೇವೆ. ಇದಕ್ಕಾಗಿ ತಯಾರಿಗೆ ಕಮಿಟಿ ರಚನೆ ಮಾಡಿದ್ದೇವೆ. ಡಾ.ರಾಜ್ ಕುಟುಂಬ ಸದಸ್ಯರು ಇರ್ತಾರೆ. ನಮಗೆ ಕರ್ನಾಟಕ ರತ್ನ ನೀಡಲು ಸಂಭ್ರಮವಾಗುತ್ತಿದೆ ಎಂದು ಹೇಳಿದರು.

ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ಕೊನೆಗೂ ಆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಉದ್ಘಾಟನೆಗೊಂಡ ಫಲ ಪುಷ್ಪ ಪ್ರದರ್ಶನದಲ್ಲಿ ಡಾ.ರಾಜ್ ಕುಮಾರ್ ಮತ್ತು ಅಪ್ಪು ನೆನಪಿನಲ್ಲಿ ವಿಶೇಷ ಪ್ರದರ್ಶನ ಆಯೋಜನೆಗೊಂಡಿದೆ. ಪುನೀತ್ ಮತ್ತು ಡಾ.ರಾಜ್ ಪುತ್ಥಳಿಗಳನ್ನು ಲಾಲ್ ಬಾಗ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ.

Latest article