Friday, January 21, 2022

ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಕಮಲ್ ಪಂತ್ ಆದೇಶ

Must read

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೋವಿಡ್‍ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 19ರ ವರೆಗೆ ನೈಟ್ ಕರ್ಪ್ಯೂ ಜೊತೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಪ್ರಕಾರ, ಯಾರು ಸಹ ಗುಂಪು ಸೇರುವಂತಿಲ್ಲ. ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡಲು ಅವಕಾಶವಿಲ್ಲ. ಪಾರ್ಕ್, ಮೈದಾನ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಂತಿಲ್ಲ.

ಯಾರಾದರೂ ನಿಯಮ ಉಲ್ಲಂಘನೆ ಮಾಡಿದ್ದು ಕಂಡುಬಂದರೆ ನಿಷೇಧಾಜ್ಞೆ ನಿಯಮಾವಳಿಗಳ ಅಡಿ ಕಾನೂನು ಕ್ರಮ ಜರುಗಿಸುವುದಾಗಿ ಆಯುಕ್ತರು ತಿಳಿಸಿದ್ದಾರೆ.

Latest article