ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕರೆಯ ಮೇರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ್ದಾರೆ.
ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಹಲವು ಕುತೂಹಲ ಮೂಡಿಸಿದೆ. ದೆಹಲಿಗೆ ಬರುವಂತೆ ಸೋನಿಯಾ ಗಾಂಧಿ ಅವರಿಂದ ದಿಢೀರ್ ಆಹ್ವಾನ ಬಂದಿದೆ. ಯಾವ ವಿಷಯ ಕುರಿತು ಚರ್ಚಿಸಲು ಎಂಬ ಬಗ್ಗೆ ಮಾಹಿತಿ ಇಲ್ಲ.
ಎಐಸಿಸಿ ಪುನರ್ ರಚನೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.