Tuesday, August 16, 2022

ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ರಾಷ್ಟ್ರಪತಿಗೆ ಪತ್ರ ಬರೆದ ಶ್ರೀರಾಮಸೇನೆ

Must read

ಬೆಂಗಳೂರು: ರಾಜಸ್ಥಾನದ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಶ್ರೀರಾಮಸೇನೆ ಬೆಂಗಳೂರು ನಗರದಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ಪತ್ರ ಬರೆದಿದೆ.

ಹತ್ಯೆ ಮಾಡಿದ ಮಹಮ್ಮದ್ ರಿಯಾಜ್​ ಅಕ್ತರ್ ಮತ್ತು ಮಹಮ್ಮದ್ ಗೌಸ್​ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದೆ. ಜೊತೆಗೆ ಮೃತ ಕನ್ಹಯ್ಯ ಲಾಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳಕ್ಕೆ ವರ್ಗಾವಣೆ ಮಾಡಬೇಕು.

ಆರೋಪಿಗಳಿಗೆ ಸಾರ್ವಜನಿಕರ ಮಧ್ಯೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ದೇಶದಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಶ್ರೀರಾಮ ಸೇನೆಯ ಬೆಂಗಳೂರು ನಗರ ಅಧ್ಯಕ್ಷ ಕೋಟೆ ಚಂದ್ರಶೇಖರ್ ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದ್ದಾರೆ.

Latest article