ಬೆಂಗಳೂರು: ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬಸವರಾಜ ಬೊಮ್ಮಾಯಿ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಎಸ್ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದಾರೆ. ಭೀಮಾಶಂಕರ್ ಗುಳೇದ್ ಅವರನ್ನು ಸಿಐಡಿಯಿಂದ ನಗರ ಪೂರ್ವ ವಲಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹಾದ್ ಅವರನ್ನು ಎಸಿಬಿಯಿಂದ ವಿಜಿಲೆನ್ಸ್ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಎರಡು ದಿನಗಳ ಹಿಂದಷ್ಟೇ 19 ಉನ್ನತ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಇದೀಗ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಆದೇಶ ಹೊರಡಿಸಿದೆ.