ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಪತ್ರಿಕೆಯ ಸಹ ಸಂಪಾದಕ ಗಂಭೀರ ಗಾಯಗೊಂಡಿರುವ ಘಟನೆ ನಗರದ ಟೌನ್ ಹಾಲ್ ಮುಂಭಾಗದಲ್ಲಿ ನಡೆದಿದೆ. ಗಂಗಾಧರ ಮೂರ್ತಿ ಗಾಯಾಳು ಎಂದು ಗುರುತಿಸಲಾಗಿದೆ.
ಜೆಸಿ ನಗರ ರಸ್ತೆ ಕಡೆಯಿಂದ ಮಾರುಕಟ್ಟೆ ಕಡೆಗೆ ಬರುತ್ತಿದ್ದ ಕೆಮಿಕಲ್ ಆಯಿಲ್ ತುಂಬಿದ್ದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದಿದೆ. ಘಟನೆಯಲ್ಲಿ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಹಲಸೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.