Thursday, January 27, 2022

ಕೊರೊನಾ ಆರ್ಭಟ: ಇಂದಿನಿಂದ 1-9ನೇ ತರಗತಿಯ ಶಾಲೆಗಳು ಬಂದ್..!

Must read

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದಿನಿಂದ ಬೆಳಗಾವಿಯಲ್ಲಿ 1ರಿಂದ 9ನೇ ತರಗತಿ ವರೆಗಿನ ಶಾಲೆಗಳು ಬಂದ್ ಮಾಡಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ನಾಲ್ಕು ದಿನಗಳ ಹಿಂದೆ 12 ಮಕ್ಕಳಲ್ಲಿ ಕೊರೊನಾ ಸೋಂಕು ಧೃಡಪಟ್ಟಿತ್ತು. ನಿನ್ನೆ ಮತ್ತೆ 68 ಮಕ್ಕಳು ಸೇರಿ 10 ಜನ ಸಿಬ್ಬಂದಿಯಲ್ಲಿ ಕೂಡ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 143 ಮಕ್ಕಳಿಗೆ ಸೋಂಕು ತಗಲಿದೆ. ಹೀಗಾಗಿ ಆತಂಕ ವ್ಯಕ್ತಪಡಿಸಿರುವ ಜಿಲ್ಲಾಡಳಿತ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇಂದಿನಿಂದ ಏಳು ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಿದೆ.

ಇನ್ನು ಸದ್ಯ ಬೆಳಗಾವಿ ಜಿಲ್ಲೆಯಲ್ಲಿ 634 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಸೋಂಕು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

Latest article