Friday, January 21, 2022

ಬೆಳಗಾವಿಯಲ್ಲಿ ಕೊರೊನಾ ಸ್ಫೋಟ: ಮೂರನೇ ಅಲೆಗೆ ಮೊದಲ ಬಲಿ

Must read

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ 276 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಈಗಾಗಲೇ ಆರಂಭವಾಗಿದ್ದು, ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗೋಕಾಕ ತಾಲೂಕಿನ 58 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 1217 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Latest article