Tuesday, August 16, 2022

ಬಚ್ಚನಕೇರಿ ಕ್ರಾಸ್ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Must read

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತನನ್ನು ಬೈಲಹೊಂಗಲ ತಾಲೂಕಿನ ಮರೀಕಟ್ಟಿ ಗ್ರಾಮದ ರಮೇಶ್ ಮಾದಿಗರ (36) ಎಂದು ಗುರುತಿಸಲಾಗಿದೆ. ರಮೇಶ್ ಹಿರೇಬಾಗೇವಾಡಿಯಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕಿತ್ತೂರಿನಲ್ಲಿ ಕೆಲಸವಿದೆ ಎಂದು ತೆರಳಿದ್ದರು. ಆದರೆ, ನಿನ್ನೆ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ರಮೇಶ್​ ಮೃತದೇಹ ಪತ್ತೆಯಾಗಿದೆ.

ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ರಮೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest article