ಬೆಳಗಾವಿ: ಪೊಲೀಸ್ ಸಿಬ್ಬಂದಿ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯ ಖಾನಾಪುರದಲ್ಲಿ ನಡೆದಿದೆ.
ಖಾನಾಪುರ ಪೊಲೀಸ್ ಠಾಣೆಯ ಸಿದ್ದು ಮೊಕಾಶಿ ಹಾಗೂ ವಿಠ್ಠಲ ಚಿಪ್ಪಲಕಟ್ಟಿ ಎಸಿಬಿಗೆ ಬಿದ್ದ ಪೊಲೀಸರು.
ಪೊಲೀಸರು ಬೆಳಗಾವಿಯ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಿಸದೇ ಇರಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು ಕೊನೆಗೆ 15 ಸಾವಿರ ರೂಪಾಯಿ ಕೊಡುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪರಶುರಾಮ ಗಾಡಿವಡ್ಡರ್ ಎಸಿಬಿಗೆ ದೂರು ನೀಡಿದ್ದು, ದೂರು ನೀಡಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಲಂಚ ಪಡೆಯುವ ವೇಳೆ ದಾಳಿ ನಡೆಸಿ ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.