Tuesday, May 17, 2022

ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ

Must read

ಬೆಳಗಾವಿ: ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಚುನಾವಣೆ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮೇ 4ರ ತಡರಾತ್ರಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.

ಕಾಲೇಜು ಚುನಾವಣೆ ವಿಚಾರಕ್ಕೆ ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿ ಬುರಾರಾಮ್ ಗೋಧರೆ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಬುರಾರಾಮ್ ಮೂಗು ಹಾಗೂ ಕಿರಿ ಬೆರಳಿಗೆ ತೀವ್ರ ಗಾಯಗಳಾಗಿವೆ. ವಿದ್ಯಾರ್ಥಿಯ ಮೂಗಿನ ಶಸ್ತ್ರಚಿಕಿತ್ಸೆಗೆ ರಾಜಸ್ಥಾನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧಬಿಮ್ಸ್ ಆಡಳಿತಾಧಿಕಾರಿ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಕಾಲೇಜಿನಿಂದ ವಿದ್ಯಾರ್ಥಿಗಳು ಅಮಾನತಾಗಿದ್ದಾರೆ.

Latest article