Friday, January 21, 2022

ಕುಂದಾನಗರಿಯಲ್ಲಿ ವೀಕೆಂಡ್ ಕರ್ಫ್ಯೂ: ಡಂಗುರ ಸಾರಿ ಗ್ರಾಮಸ್ಥರಿಗೆ ಎಚ್ಚರಿಕೆ

Must read

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಪೊಲೀಸರು ಮತ್ತು ಪಾಲಿಕೆ ಮಾರ್ಷಲ್​​ಗಳು ಫೀಲ್ಡ್​​ಗಿಳಿದು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪೊಲೀಸರು ಜಿಲ್ಲೆಯ ಎಲ್ಲಾ ಕಡೆಗೂ ತೆರಳಿ ಅಂಗಡಿ ಬಂದ್​ ಮಾಡಿಸುತ್ತಿದ್ದು, ವ್ಯಾಪಾರಸ್ಥರು ತರಾತುರಿಯಲ್ಲಿ ಅಂಗಡಿ ಬಾಗಿಲು ಹಾಕಿ ತಮ್ಮ ಮನೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ನಗರದ ಪ್ರಮುಖ ರಸ್ತೆಗಳನ್ನು ಬ್ಯಾರಿಕೆಡ್ ಹಾಕಿ ಬಂದ್​ ಮಾಡಲಾಗಿದೆ.

ಇನ್ನು ಹಳ್ಳಿಹಳ್ಳಿಗಳಲ್ಲೂ ಕೊರೊನಾ ಹಾಗೂ ವೀಕೆಂಡ್​​ ಕರ್ಫ್ಯೂ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರತಿಯೊಬ್ಬರು ಮಾಸ್ಕ್​​ ಧರಿಸುವಂತೆ ಹಾಗೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಡಂಗುರ ಸಾರಿದ್ದಾರೆ.

Latest article