ವಿಜಯನಗರ: ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ.
ವೆಂಕಟ್ ಪ್ರಶಾಂತ್ (42), ಡಿ.ಚಂದ್ರಕಲಾ (38 ), ಹೆಚ್.ಎ ಅರ್ದ್ವಿಕ್( 16), ಪ್ರೇರಣಾ( 8 ) ಮೃತ ದುರ್ದೈವಿಗಳು.
ಇಂದು ಬೆಳಗಿನ ಜಾವ ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯ ಬಹುತೇಕ ಭಾಗ ಹೊತ್ತಿ ಉರಿದಿದೆ. ಬೆಂಕಿ ಆವರಿಸುತ್ತಿದ್ದಂತೆ ರಾಘವೇಂದ್ರ ಶೆಟ್ಟಿ ಪತ್ನಿ ರಾಜಶ್ರೀ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ವೆಂಕಟ್ ಪ್ರಶಾಂತ್ ಕುಟುಂಬ ಹೊರ ಬರಲಾಗದೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಮರಿಯಮ್ಮನಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.