Thursday, October 6, 2022

ಬಳ್ಳಾರಿಯನ್ನು ಕೊರೊನಾ ಮುಕ್ತ ಮಾಡಲು ಅಧಿಕಾರಿಗಳ ಪಣ: ಲಸಿಕೆಯೊಂದೇ ರಾಮಬಾಣ

Must read

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣವಾಗಿ ಕೊರೊನಾ ಮುಕ್ತ ಮಾಡಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಪಣತೊಟ್ಟಿದೆ.

ಲಸಿಕೆ ವಂಚಿತರ ಪತ್ತೆಗಾಗಿ ಮನೆ ಮನೆಗೆ ಭೇಟಿ ನೀಡಿ ಮನವೊಲಿಸುತ್ತಿರುವ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಗಾಗಿ ಎಲ್ಲರೂ ಶ್ರಮಿಸಬೇಕೆಂದು ಕರೆಕೊಟ್ಟಿದ್ದಾರೆ. ಕೊರೊನಾ ಲಸಿಕೆಯಿಂದ ಯಾರೊಬ್ಬ ನಾಗರಿಕರಿಗೂ ತೊಂದರೆಯಾಗುವುದಿಲ್ಲ. ಯಾರೂ ಭಯಭೀತರಾಗದೇ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕಂಪ್ಲಿ ಹಾಗೂ ಕುರುಗೊಡು ಭಾಗದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕೊರೊನಾ ಮುಕ್ತಕ್ಕಾಗಿ ಅವಿರತ ಪ್ರಯತ್ನ ಮಾಡುತ್ತಿದ್ದಾರೆ.

Latest article