Sunday, October 2, 2022

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಸಾವು

Must read

ಬಳ್ಳಾರಿ: ಕಾರು ಮತ್ತು ಬೈಕ್​ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಹಲಕುಂದಿ ಮಿಂಚೇರಿ ಬೈಪಾಸ್​​ನಲ್ಲಿ ಕಾರು ಮತ್ತು ಬೈಕ್​​ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪಿದ್ದಾನೆ. ಘಟನೆಯಲ್ಲಿ ಮತ್ತೋರ್ವ ಯುವಕ ಗಾಯಗೊಂಡಿದ್ದು, ಗಾಯಾಳುವನ್ನು ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳದಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest article