Thursday, January 20, 2022

ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ

Must read

ಬಳ್ಳಾರಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ.

ಸಿರಗುಪ್ಪ ತಾಲೂಕಿನ ಕೆರೆಗಳು ನದಿಗಳು ಸಂಪೂರ್ಣ ಭರ್ತಿಯಾಗಿದ್ದು, ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ ರೈತರನ್ನು ರಕ್ಷಣೆ ಮಾಡಲಾಗಿದೆ.

ರೈತರಾದ ವೀರೇಶಪ್ಪ , ಮಾರಪ್ಪ ಮತ್ತು ಮುಖಯ್ಯ ಎನ್ನುವವರು ಜಾನುವಾರಗಳಿಗೆ ಮೇವು ನೀಡಲು ಹೋಗಿ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ವಿಚಾರ ತಿಳಿದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಕಾರ್ಯಾಚರಣೆಗಿಳಿದು ಮೂವರನ್ನು ರಕ್ಷಿಸಿದ್ದಾರೆ. ಅಲ್ಲದೇ 250 ಕುರಿಗಳು ಹಾಗೂ 20 ದನ ಕರುಗಳನ್ನು ಸಹ ರಕ್ಷಣೆ ಮಾಡಲಾಗಿದೆ.

Latest article