Thursday, January 20, 2022

ಗಣಿ ಜಿಲ್ಲೆಯಲ್ಲಿ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Must read

ಬಳ್ಳಾರಿ: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆರೆ, ಹಳ್ಳಗಳು ಬಹುತೇಕ ಭರ್ತಿಯಾಗಿದೆ.

ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಮೀನುಗಳಿಗೂ ನೀರು ನುಗ್ಗಿದ್ದು, ಮೆಣಸಿನಕಾಯಿ, ಭತ್ತ ಹಾಗೂ ಹತ್ತಿ ಬೆಳೆಗಳು ಸಂಪೂರ್ಣ ನೀರುಪಾಲಾಗಿದೆ.

ಬಳ್ಳಾರಿಯ ಸಂಡೂರು ತಾಲೂಕಿನ ಕೆರೆಗಳು ಭರ್ತಿಯಾಗಿರುವ ಹಿನ್ನಲೆಯಲ್ಲಿ ಸ್ಥಳೀಯ ಗ್ರಾಮಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಇನ್ನು ಜಿಲ್ಲೆಯಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Latest article