Thursday, January 27, 2022

ಶಾಸಕ ಸೋಮಶೇಖರ ರೆಡ್ಡಿಗೆ ಸಂಕಷ್ಟ: ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಿಸಿರುವ ಕೇಸ್​ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ

Must read

ಬಳ್ಳಾರಿ: ಲೈಸೆನ್ಸ್ ನವೀಕರಿಸದೆ ರಿವಾಲ್ವರ್ ಇಟ್ಟುಕೊಂಡ ಶಾಸಕ ಸೋಮಶೇಖರ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಶಾಸಕರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಸೋಮಶೇಖರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದೆ. ಶಾಸಕ ಸೋಮಶೇಖರ ರೆಡ್ಡಿ 2009ರ ಡಿ.31 ರಿಂದ 2011ರ ನ.10 ರವರೆಗೆ ಪರವಾನಗಿ ನವೀಕರಿಸದೆ ರಿವಾಲ್ವರ್ ಇರಿಸಿಕೊಂಡಿದ್ದರು. ಜಿಲ್ಲಾಧಿಕಾರಿ ಬಿಸ್ವಾಸ್ ಈ ಬಗ್ಗೆ ಬಳ್ಳಾರಿ ಎಸ್​ಪಿಗೆ 2012ರಲ್ಲಿ 3 ಬಾರಿ ಪತ್ರ ಬರೆದಿದ್ದರು. ಈ ಪತ್ರ ಆಧರಿಸಿ ಬಳ್ಳಾರಿ ಗ್ರಾಮಾಂತರ ಪೊಲೀಸರು ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್ 21(1) (ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಈ ಪ್ರಕರಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ.

 

Latest article