ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ಅವರು ಭಾಗವಹಿಸಿದ ಸಮಾರಂಭದಲ್ಲಿ ಕನ್ನಡ ಧ್ವಜಕ್ಕೆ ಅಪಮಾನ ಮಾಡಲಾಗಿದೆ.
ಬಳ್ಳಾರಿ ಕನ್ನಡ ಪರ ಸಂಘಟನೆ ಹಮ್ಮಿಕೊಡಿದ್ದ ಕಾರ್ಯಕ್ರಮದಲ್ಲಿ ಜೂನಿಯರ್ ವಿಷ್ಣುವರ್ಧನ್ ಎಂದು ಕರೆಸಿಕೊಳ್ಳುವ ವ್ಯಕ್ತಿ ಕನ್ನಡ ಧ್ವಜ ಉಲ್ಟಾ ಹಿಡಿದು ನೃತ್ಯ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡದ ಘಟಾನುಘಟಿ ನಾಯಕರು ಭಾಗವಹಿಸಿದ್ದರೂ ಕೂಡ ಕನ್ನಡ ಧ್ವಜದ ಕಡೆಗೆ ಯಾರೂ ಗಮನ ಹರಿಸಿಲ್ಲ ಎನ್ನುವುದು ದುರಂತವೇ ಸರಿ.
ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಸಾರಿಗೆ ಸಚಿವ ಶ್ರೀ ರಾಮುಲು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಕನ್ನಡ ಪರ ಸಂಘಟನೆಯ ಮುಖಂಡರು ಭಾಗಿಯಾಗಿದ್ದರು.
ಈ ರೀತಿ ಕನ್ನಡದ ಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ಕ್ರಮತೆಗೆದುಕೊಳ್ಳುವಂತೆ ಬಳ್ಳಾರಿ ಜಿಲ್ಲೆಯ ಜನತೆ ಆಗ್ರಹಿಸಿದ್ದಾರೆ.