Thursday, January 20, 2022

ಬಳ್ಳಾರಿಯಲ್ಲಿ ಪುನೀತ್​ ಹೆಸರಿನಲ್ಲಿ ಉಚಿತ ವಸತಿ ಶಾಲೆ ನಿರ್ಮಾಣ-ಜನಾರ್ಧನ ರೆಡ್ಡಿ

Must read

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಪುನೀತ್​ ರಾಜ್​ಕುಮಾರ್ ಹೆಸರಿನಲ್ಲಿ ಉಚಿತ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಜನಾರ್ಧನರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿ ಪುನೀತ್​ ರಾಜ್​ಕುಮಾರ್ ಹೆಸರಿನಲ್ಲಿ ವಸತಿ ಶಾಲೆ ನಿರ್ಮಾಣ ಮಾಡಲಾಗುವುದು. ಪುನೀತ್​ ರಾಜ್​​ಕುಮಾರ್​ಗೆ ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಇನ್ನೂ ದೊಡ್ಡ ಪ್ರಶಸ್ತಿಗಳು ಲಭಿಸಲಿ ಎಂದರು.

ಇನ್ನು ಮುಂದೆ ಬಳ್ಳಾರಿಯಲ್ಲಿ ವಾಸ ಮಾಡುವೆ. ಶಾಶ್ವತವಾಗಿ ಬಳ್ಳಾರಿಯಲ್ಲಿ ವಾಸಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಬಳ್ಳಾರಿ ನಗರದಲ್ಲಿ ಹೆಚ್ಚು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವೆ. ಆರೋಗ್ಯ ಕ್ಷೇತ್ರಕ್ಕೂ ಸೇವೆ ಸಲ್ಲಿಸುವ ಗುರಿ ಇದೆ ಎಂದರು.

Latest article